ಕರ್ನಾಟಕ

karnataka

ಮುಂದಿನ 4 ದಿನಗಳಲ್ಲಿ ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ

By

Published : Nov 4, 2020, 4:44 PM IST

ದಕ್ಷಿಣ ಭಾರತದ ಹಲವೆಡೆ ಮುಂದಿನ ನಾಲ್ಕು ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

imd
ಭಾರತೀಯ ಹವಾಮಾನ ಇಲಾಖೆ

ನವದೆಹಲಿ:ಮುಂದಿನ ನಾಲ್ಕು ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕೇರಳ, ಮಾಹೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಲಕ್ಷದ್ವೀಪದ ಕೆಲವು ಪ್ರದೇಶಗಳಲ್ಲಿ ನವೆಂಬರ್ 4 ಮತ್ತು 8ರ ನಡುವೆ ಮಳೆಯಾಗಬಹುದು ಹವಾಮಾನ ಇಲಾಖೆ ಹೇಳಿದ್ದು, ಮುಂಜಾಗ್ರತೆ ವಹಿಸುವಂತೆ ಸೂಚಿಸಿದೆ.

ಶ್ರೀಲಂಕಾ ಕರಾವಳಿಯ ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಚಂಡಮಾರುತವೊಂದು ಮುಂದುವರೆದಿದ್ದು, ಮತ್ತೊಂದೆಡೆ ಅಗ್ನೇಯ ಅರೇಬಿಯನ್ ಸಮುದ್ರದಿಂದ ಕರ್ನಾಟಕ ಕರಾವಳಿಗೆ ಚಲಿಸುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ 5 ದಿನಗಳಲ್ಲಿ ಉತ್ತರ, ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ಪೂರ್ವ ಭಾರತದ ಕೆಲವು ಭಾಗಗಳಲ್ಲಿ ಶುಷ್ಕ ಹವಾಮಾನ ಮೇಲುಗೈ ಸಾಧಿಸುವ ಸಾಧ್ಯತೆಯಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.

ABOUT THE AUTHOR

...view details