ಕರ್ನಾಟಕ

karnataka

ETV Bharat / bharat

ಹೆಣ್ಣು ಮಕ್ಕಳ ಸಬಲೀಕರಣಕ್ಕೆ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ: ಪ್ರಧಾನಿ ಮೋದಿ - ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

ಭಾರತವು ಪ್ರತಿ ವರ್ಷ ಜನವರಿ 24 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸುತ್ತದೆ. ಈ ದಿನ ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ನಡೆಯುತ್ತಿರುವ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ
ಪ್ರಧಾನಿ ಮೋದಿ

By

Published : Jan 24, 2022, 9:22 PM IST

Updated : Jan 24, 2022, 9:34 PM IST

ನವದೆಹಲಿ:ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಸಂದರ್ಭದಲ್ಲಿ, ನಮ್ಮ ಸರ್ಕಾರವು ಕೈಗೊಳ್ಳುವ ಪ್ರತಿಯೊಂದು ಅಭಿವೃದ್ಧಿ ಉಪಕ್ರಮಗಳಲ್ಲಿ ಹೆಣ್ಣು ಮಗುವಿನ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತದೆ. ಅಲ್ಲದೇ ಅವರ ಘನತೆ ಮತ್ತು ಅವಕಾಶಗಳನ್ನು ಹೆಚ್ಚಿಸುವತ್ತಾ ಗಮನ ಹರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾರತವು ಪ್ರತಿ ವರ್ಷ ಜನವರಿ 24 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಸಹಯೋಗದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸುತ್ತದೆ.

ಇದನ್ನೂ ಓದಿ: ಆನ್​​ಲೈನ್ ತರಗತಿ ವೇಳೆ ದಿಢೀರ್​ ಅರೆನಗ್ನ ಡ್ಯಾನ್ಸ್​​​.. ತನಿಖೆಗೆ ಸೂಚನೆ ನೀಡಿದ ಶಿಕ್ಷಣ ಸಚಿವ

"ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವು, ನಮ್ಮ ಬದ್ಧತೆಯನ್ನು ಪುನರುಚ್ಚರಿಸಲು ಮತ್ತು ಹೆಣ್ಣು ಮಕ್ಕಳ ಸಬಲೀಕರಣಕ್ಕಾಗಿ ನಡೆಯುತ್ತಿರುವ ಪ್ರಯತ್ನಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶವನ್ನು ಹೊಂದಿದೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. " ಇದು ವಿವಿಧ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳ ಸಾಧನೆಗಳನ್ನು ಆಚರಿಸುವ ದಿನವಾಗಿದೆ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

"ನಮ್ಮ ಸರ್ಕಾರವು ಕೈಗೊಂಡ ಪ್ರತಿಯೊಂದು ಅಭಿವೃದ್ಧಿ ಕ್ರಮಗಳಲ್ಲಿ, ನಾವು ಹೆಣ್ಣು ಮಗುವಿನ ಸಬಲೀಕರಣಕ್ಕೆ ಮತ್ತು ನಮ್ಮ ನಾರಿ ಶಕ್ತಿಯನ್ನು ಬಲಪಡಿಸಲು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದೇವೆ" ಎಂದು ಮೋದಿ ಹೇಳಿದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 24, 2022, 9:34 PM IST

ABOUT THE AUTHOR

...view details