ಹೈದರಾಬಾದ್: ಮಾಸ್ಕ್ ಹಾಕದೇ ಓಡಾಡುವವರಿಗೆ 1,000 ರೂಪಾಯಿ ದಂಡ ವಿಧಿಸಿ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪರೀಕ್ಷೆ ಪ್ರಮಾಣ ಹೆಚ್ಚಿಸಬೇಕು. ಎಲ್ಲಾ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ ನೀಡಬೇಕು. ಒಂದು ವಾರದಲ್ಲಿ ಸಂಪೂರ್ಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ. ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಕಠಿಣ ನಿಯಮ ಜಾರಿಗೊಳಿಸಿರಿ. ಯಾರು ಮುಖಗವಸು ಧರಿಸದೇ ಓಡಾಡುತ್ತಾರೋ ಅವರಿಗೆ ಒಂದು ಸಾವಿರ ದಂಡ ವಿಧಿಸಬೇಕು. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಡಿಜಿಪಿಯವರು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಸಿಎಂ ಸೂಚಿಸಿದರು.