ನವದೆಹಲಿ:ಪ್ರಸ್ತುತ ಶೇ.10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಅಂತಹ ಜಿಲ್ಲೆಗಳಲ್ಲಿ ಜನಸಂದಣಿ ತಡೆಯಲು ಪರಿಣಾಮಕಾರಿ ಕ್ರಮಗಳನ್ನು ರಾಜ್ಯ ಸರ್ಕಾರಗಳು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.
ಕೋವಿಡ್ ಪ್ರಕರಣಗಳ ಏರಿಕೆ ಮತ್ತು ಪಾಸಿಟಿವಿಟಿ ದರ ಹೆಚ್ಚಿರುವ 10 ರಾಜ್ಯಗಳ ಪರಿಸ್ಥಿತಿಯನ್ನು ಗಮನಿಸುತ್ತಿದ್ದೇವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ. ಶೇ. 10 ಹೆಚ್ಚು ಪಾಸಿಟಿವ್ ದರ ಇರುವ ಜಿಲ್ಲೆಗಳಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸುವಂತೆ ಅವರು ತಿಳಿಸಿದರು.
ಪಾಸಿಟಿವಿಟಿ ಪ್ರಮಾಣ ಅಧಿಕ ಇರುವ ಜಿಲ್ಲೆಗಳಲ್ಲಿ ಜನರು ಗುಂಪು ಸೇರುವುದು, ಪರಸ್ಪರ ಅಂತರ ಪಾಲಿಸದೆ ಬೆರೆಯುವುದು ಮತ್ತು ಮಾಸ್ಕ್ ಧರಿಸದೇ ಇರುವ ಬಗ್ಗೆ ನಿಗಾ ಇಡಬೇಕು. ಅಲ್ಲದೇ, ಜಿಲ್ಲೆಗಳಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬೇಕಾಗಿದೆ. ಈ ಹಂತದಲ್ಲಿ ನಾವು ನಿರ್ಲಕ್ಷ್ಯ ಮಾಡಿದರೆ, ಮುಂದೆ ಅಪಾಯಕ್ಕೆ ಕಾರಣವಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.
ಇದನ್ನೂಓದಿ: ಸೆಪ್ಟೆಂಬರ್ನಲ್ಲಿ ಸ್ಪುಟ್ನಿಕ್ ವಿ ಲಸಿಕೆ ಭಾರತದಲ್ಲಿ ಪೂರ್ಣ ಬಳಕೆಗೆ ಸಿದ್ಧ : ಆರ್ಡಿಐಎಫ್