ಹೈದರಾಬಾದ್: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,870 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 200 ದಿನಗಳಲ್ಲಿ ಸತತವಾಗಿ ಎರಡನೇ ದಿನ 20,000ಕ್ಕಿಂತ ಕಡಿಮೆ ಕೋವಿಡ್ ಪ್ರಕರಣ ವರದಿಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,82,520ರಷ್ಟಾಗಿದೆ.
378 ಮಂದಿ ಸೋಂಕಿತರು ಕೋವಿಡ್ಗೆ ಬಲಿಯಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 4,47,751ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಗಳಲ್ಲಿ ಕೇರಳದಲ್ಲೇ 11,196 ಪ್ರಕರಣಗಳು ಪತ್ತೆಯಾಗಿ, 149 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿ- ಅಂಶಗಳು ತಿಳಿಸಿವೆ.