ಕರ್ನಾಟಕ

karnataka

By

Published : Jul 10, 2022, 8:05 AM IST

ETV Bharat / bharat

ದಿಯು ಮುನ್ಸಿಪಲ್ ಕೌನ್ಸಿಲ್‌ನಲ್ಲಿ ಬಿಜೆಪಿ ಕ್ಲೀನ್‌ಸ್ವೀಪ್; 15 ವರ್ಷದ ನಂತ್ರ ಅಧಿಕಾರದ ಚುಕ್ಕಾಣಿ

ದಿಯು ಮುನ್ಸಿಪಲ್ ಕೌನ್ಸಿಲ್ ಚುನಾವಣೆಯ ಫಲಿತಾಂಶ ನಿನ್ನೆ ಹೊರಬಿದ್ದಿದ್ದು, ಕಾಂಗ್ರೆಸ್​ಗೆ ಮುಖಭಂಗವಾಗಿದೆ. ಭಾರತೀಯ ಜನತಾ ಪಕ್ಷ ಎಲ್ಲಾ ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ.

ದೀಪೇಶ್ ತಾಂಡೇಲ್
ದೀಪೇಶ್ ತಾಂಡೇಲ್

ದಿಯು: ದಿಯು ಮುನ್ಸಿಪಲ್ ಕೌನ್ಸಿಲ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 13 ಸ್ಥಾನಗಳನ್ನೂ ಗೆದ್ದುಕೊಂಡಿದೆ. ಕಾಂಗ್ರೆಸ್‌ ಖಾತೆ ತೆರೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಮುಖೇನ ಒಂದೂವರೆ ದಶಕದ ನಂತರ ಕೌನ್ಸಿಲ್‌ ಅಧಿಕಾರವನ್ನು ಕೇಸರಿ ಪಕ್ಷ ತನ್ನ ತೆಕ್ಕೆಗೆ ತೆಗೆದುಕೊಂಡಿತು.

ಈ ಹಿಂದೆ ಬಿಜೆಪಿ 6 ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು. ಆದರೆ, ಉಳಿದ ಏಳು ಸ್ಥಾನಕ್ಕೆ ಜುಲೈ 7 ರಂದು ಚುನಾವಣೆ ನಡೆದು, ಶನಿವಾರ ಫಲಿತಾಂಶ ಹೊರಬಿದ್ದಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಡಿಎನ್‌ಎಚ್ ಮತ್ತು ದಮನ್-ದಿಯು ಬಿಜೆಪಿ ರಾಜ್ಯಾಧ್ಯಕ್ಷ ದೀಪೇಶ್ ತಾಂಡೇಲ್, "ಮತದಾರರು ತುಷ್ಟೀಕರಣ ರಾಜಕಾರಣವನ್ನು ತಿರಸ್ಕರಿಸಿ ಅಭಿವೃದ್ಧಿಯ ರಾಜಕೀಯವನ್ನು ಒಪ್ಪಿಕೊಂಡಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿ ಮತ್ತಷ್ಟು ಅಭಿವೃದ್ಧಿಗೊಳಿಸಲು ಸಹಕರಿಸಿದ ಎಲ್ಲಾ ಮತದಾರರಿಗೂ ಧನ್ಯವಾದಗಳು" ಎಂದರು.

ಇದನ್ನೂ ಓದಿ:'ತಾಕತ್ತಿದ್ದರೆ ನಮ್ಮನ್ನು ತಡೆಯಿರಿ' ದೇಶದ 133 ಕೋಟಿ ಭಾರತೀಯರಿಗೆ ಪ್ರಧಾನಿ ಸವಾಲು: ರಾಹುಲ್ ಟ್ವೀಟ್

ABOUT THE AUTHOR

...view details