ಕರ್ನಾಟಕ

karnataka

ETV Bharat / bharat

2024ರ ಜನವರಿಯಲ್ಲಿ ಶ್ರೀರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ - 2024ರ ಜನವರಿಯಲ್ಲಿ ಶ್ರೀರಾಮ ಮಂದಿರ

2024 ರ ಜನವರಿಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಭಕ್ತರ ದರ್ಶನಕ್ಕೆ ಬಾಗಿಲು ತೆರೆಯಲಿದೆ.

2024ರ ಜನವರಿಯಲ್ಲಿ ಶ್ರೀರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ
Ram temple to open to devotees in January 2024 Champat Rai

By

Published : Oct 25, 2022, 6:11 PM IST

ಅಯೋಧ್ಯಾ: ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ರಾಮ ಮಂದಿರವು ಭಕ್ತರ ದರ್ಶನಕ್ಕೆ ಬಾಗಿಲು ತೆರೆಯಲಿದೆ ಎಂದು ದೇಗುಲ ನಿರ್ಮಾಣದ ಮೇಲ್ವಿಚಾರಣೆಗಾಗಿ ಸ್ಥಾಪಿಸಲಾದ ಟ್ರಸ್ಟ್‌ನ ಸದಸ್ಯರೊಬ್ಬರು ತಿಳಿಸಿದ್ದಾರೆ. ಶೇ 50 ರಷ್ಟು ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಮತ್ತು ಒಟ್ಟಾರೆ ಪ್ರಗತಿ ತೃಪ್ತಿಕರವಾಗಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ಮಂಗಳವಾರ ತಿಳಿಸಿದೆ.

ಮಕರ ಸಂಕ್ರಾಂತಿ ಹಬ್ಬದಂದು ದೇಗುಲದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ದೇವಾಲಯವನ್ನು ಭಕ್ತರಿಗೆ ತೆರೆಯಲಾಗುವುದು ಎಂದು ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ. ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ದೇಗುಲದ ನೆಲ ಮಹಡಿ ಸಿದ್ಧಗೊಳ್ಳಲಿದ್ದು, 2024ರ ಜನವರಿ 14ರ ಸುಮಾರಿಗೆ ರಾಮನ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗುವುದು ಎಂದು ಅವರು ಹೇಳಿದರು.

ರಾಮ ಮಂದಿರ ನಿರ್ಮಾಣಕ್ಕೆ ಅಂದಾಜು 1,800 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು. ಇಲ್ಲಿ ಪ್ರಮುಖ ಹಿಂದೂ ಸಂತರ ವಿಗ್ರಹಗಳಿಗೆ ಸ್ಥಳಾವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: ಶಿರಡಿ ಸಾಯಿಬಾಬಾ ಮಂದಿರಕ್ಕೆ ಭೇಟಿ ನೀಡಿದ ಅನಂತ್​ ಅಂಬಾನಿ.. 1 ಕೋಟಿ 51 ಲಕ್ಷ ರೂಪಾಯಿ ದೇಣಿಗೆ

ABOUT THE AUTHOR

...view details