ಲಖನೌ:ಉತ್ತರ ಪ್ರದೇಶದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ ಎಂಬ ಆರೋಪ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಯುಪಿಯಲ್ಲಿ ಜಂಗಲ್ ರಾಜ್ ಬೆಳೆಯುತ್ತಿದೆ, ಕೆಲವು ವರ್ಗಾವಣೆಗಳು ಹೊರತುಪಡಿಸಿದರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ವಿಕಾಸ್ ದುಬೆ ಘಟನೆ ಬಳಿಕ ಹಲವು ಅಪರಾಧ ಕೃತ್ಯಗಳು ನಡೆಯುತ್ತಿವೆ. ಕೆಲವು ಹಲ್ಲೆಕೋರರು ಗಜಿಯಾಬಾದ್ ಮೂಲದ ಪತ್ರಕರ್ತ ವಿಕ್ರಮ್ ಜೋಶಿರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಜಂಗಲ್ ರಾಜ್ಯದ ಮಹಿಳೆಯರ ರಕ್ಷಣೆ ದೇವರ ಕೈಯಲ್ಲಿ; ಯುಪಿ ಸಿಎಂ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ - ಉತ್ತರ ಪ್ರದೇಶ
ಯುಪಿಯಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳ ಬಗ್ಗೆ ಕಾಂಗ್ರೆಸ್ ನಾಯಕಿ, ಆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸಿಎಂ ಯೋಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಗೂಂಡಾ ರಾಜ್ಯ ಸ್ಥಾಪಿಸುವ ಮೂಲಕ ಸಿಎಂ ಹೊಸ ದಾಖಲೆ ಬರೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಜಂಗಲ್ ರಾಜ್, ದೇವರ ಕೈಯಲ್ಲಿ ಮಹಿಳೆಯರ ರಕ್ಷಣೆ; ಯುಪಿ ಸಿಎಂ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಮುಖ್ಯಮಂತ್ರಿಯವರು ಇಂತಹ ಸುದ್ದಿಗಳನ್ನು ನೋಡುವುದನ್ನು ನಿಲ್ಲಿಸಿದ್ದಾರೆಯೇ? ಯುಪಿಯಲ್ಲಿ ಗೂಂಡಾ ರಾಜ್ಯ ಸ್ಥಾಪಿಸುವ ಮೂಲಕ ಹೊಸ ದಾಖಲೆ ಬರೆಯಲಾಗುತ್ತಿದೆ. ಸಿಎಂ ತವರು ಕ್ಷೇತ್ರದಲ್ಲಿ ಅಪಹರಣದ ಘಟನೆ ಮತ್ತು ಕಾಸ್ಗಂಜ್‌ನಲ್ಲಿ ಹತ್ಯಾಕಾಂಡ ನಡೆದಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.