ಭುವನೇಶ್ವರ್(ಒಡಿಶಾ): ದೇಶದಲ್ಲಿ ಕೋವಿಡ್ ಮೂರನೇ ಅಲೆ ಭೀತಿ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಕೇವಲ 2 ದಿನಗಳಲ್ಲಿ 242 ಮಕ್ಕಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿತ್ತು. ಇದರ ಬೆನ್ನಲ್ಲೇ ಇದೀಗ ಒಡಿಶಾದಲ್ಲೂ ಅನೇಕ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇವಲ ಎರಡು ದಿನಗಳಲ್ಲಿ 242 ಮಕ್ಕಳಲ್ಲಿ ಸೋಂಕು ದೃಢಗೊಂಡಿದ್ದು ಚಿಂತೆಗೀಡು ಮಾಡಿದೆ.
ಇದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಎಂಇಟಿ ಮುಖ್ಯಸ್ಥ ಸಿಬಿಕೆ ಮೊಹಾಂತಿ, 0-18 ವಯಸ್ಸಿನ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಕಂಡು ಬರುತ್ತಿದೆ. ಸದ್ಯ ದೇಶದಲ್ಲಿ ಶೇ. 12ರಷ್ಟು ಮಕ್ಕಳಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂದಿದ್ದಾರೆ. 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ಇದೀಗ ಹೆಚ್ಚಿನ ಮಕ್ಕಳು ಸೋಂಕಿಗೊಳಗಾಗುತ್ತಿದ್ದಾರೆ. ಅವರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.