ಗುಜರಾತ್:ಅಹ್ಮದಾಬಾದ್ನ ಸಬರಮತಿಯಲ್ಲಿ ನವೀಕೃತಗೊಂಡಿರುವ ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನ ಲೋಕಾರ್ಪಣೆಗೊಂಡಿತು.
ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನ ಲೋಕಾರ್ಪಣೆ ಮಾಡಿದ ರಾಷ್ಟ್ರಪತಿ - Inauguration of Motera stadium in Ahmedabad
ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆಗೊಳಿಸಿದರು. ದೇಶದ ಅತಿದೊಡ್ಡ ಕ್ರೀಡಾಂಗಣ ಇದಾಗಿದ್ದು, 1.10 ಲಕ್ಷ ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ.
ಇಂದು ಮೊಟೆರಾದ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಮೈದಾನ ಲೋಕಾರ್ಪಣೆ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನ ಉದ್ಘಾಟಿಸಿದರು. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ ಕಿರೆನ್ ರಿಜಿಜು ಮತ್ತು ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಇತರ ಪ್ರಮುಖರು ಭಾಗವಹಿಸಿದ್ದಾರೆ.
ಈ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಇದು ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಈ ಕ್ರೀಡಾಂಗಣದಲ್ಲಿನ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಗಿದೆ.
Last Updated : Feb 24, 2021, 1:12 PM IST