ಬೆಂಗಳೂರು:ಎಂಜಿಎಂ ಗ್ರೂಪ್ ನ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಅಮ್ಯೂಸ್ಮೆಂಟ್ ಪಾರ್ಕ್ ಸೇರಿದಂತೆ ಇನ್ನೂ ಹಲವಾರು ವ್ಯಾಪಾರ ವ್ಯವಹಾರಗಳನ್ನು ನಡೆಸುವ ಎಂಜಿಎಂ ಗ್ರೂಪ್ನ ಕಚೇರಿಗಳ ಮೇಲೆ ಆದಾಯ ತೆರಿಗೆ ದಾಳಿ ನಡೆಸಲಾಗಿದೆ. ಕಂಪನಿಯಿಂದ ಆದಾಯ ತೆರಿಗೆ ಪಾವತಿಯಲ್ಲಿ ವಂಚನೆ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಚೆನ್ನೈ, ನೆಲ್ಲೈ ಹಾಗೂ ಬೆಂಗಳೂರು ಸೇರಿದಂತೆ ಸುಮಾರು 40 ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.