ನವದೆಹಲಿ:ಕೇಂದ್ರ ಸರ್ಕಾರ 60 ವರ್ಷ ಮೇಲ್ಪಟ್ಟ ಮತ್ತು ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆಯ ಬೂಸ್ಟರ್ ಡೋಸ್ ನೀಡುತ್ತಿದ್ದು, ಇದಕ್ಕೆ ಹೆಚ್ಚಿನ ಪ್ರತಿಕ್ರಿಯೆ ಸಿಗುತ್ತಿಲ್ಲ. ಈ ಮಧ್ಯೆಯೇ ವರದಿಯೊಂದು ಕೊವ್ಯಾಕ್ಸಿನ್ ಲಸಿಕೆಯ ಬೂಸ್ಟರ್ ಡೋಸ್ ಹಾಕಿಸಿಕೊಳ್ಳುವುದರಿಂದ ದೇಹದಲ್ಲಿ ರೋಗ ನಿರೋಧಕ ಪ್ರತಿಕಾಯಗಳು ಇನ್ನಷ್ಟು ಉತ್ಪತ್ತಿಯಾಗಿ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಸಹಕಾರಿಯಾಗಲಿದೆ ಎಂದು ಹೇಳಿದೆ.
ಕೊವ್ಯಾಕ್ಸಿನ್ ಲಸಿಕೆಯ ಬೂಸ್ಟರ್ ಡೋಸ್‌ನ ಪರಿಣಾಮವನ್ನು ಪರೀಕ್ಷಿಸಲು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಅಧ್ಯಯನವನ್ನು ನಡೆಸಿದೆ. ವರದಿಯ ಪ್ರಕಾರ ಈ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ ಪಡೆದಲ್ಲಿ SARS-CoV-2 ವಿರುದ್ಧ ಪ್ರತಿರೋಧ ಒಡ್ಡುವ ಪ್ರತಿಕಾಯಗಳು ಹೆಚ್ಚಲಿವೆ ಎಂದು ವರದಿ ಸಾಬೀತುಪಡಿಸಿದೆ.