ಮುಂಬೈ: ಕೊರೊನಾ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತೆಯರಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಇದೀಗ ಮಹಾರಾಷ್ಟ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಅವರ ಸಂಬಳದಲ್ಲಿ 1500 ರೂಪಾಯಿ ಏರಿಕೆ ಮಾಡುವುದಾಗಿ ಹೇಳಿದೆ.
ಇದೇ ವಿಚಾರವಾಗಿ ಮಾತನಾಡಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾಹಿತಿ ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 71,000 ಆಶಾ ಕಾರ್ಯಕರ್ತೆಯರಿಗೆ ಇದರ ಲಾಭ ಸಿಗಲಿದ್ದು, ಇದಕ್ಕಾಗಿ 275 ಕೋಟಿ ರೂ. ಖರ್ಚು ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ರಾಜ್ಯದಲ್ಲಿ 1200 ಡಾಕ್ಟರ್ಸ್ಗಳನ್ನ ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದ್ದು, ಸೆಪ್ಟೆಂಬರ್ ಅಂತ್ಯದೊಳಗೆ ಈ ಕಾರ್ಯ ಮುಕ್ತಾಯಗೊಳ್ಳಲಿದೆ. ಇದರ ಜೊತೆಗೆ 7 ಸಾವಿರ ಆರೋಗ್ಯ ಸಿಬ್ಬಂದಿಯನ್ನು ಸಹ ನೇಮಕ ಮಾಡಿಕೊಳ್ಳಲು ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡಿದರು.