ಕರ್ನಾಟಕ

karnataka

ETV Bharat / bharat

ಇಂಗ್ಲೆಂಡ್ ವಿರುದ್ಧದ ಟಿ-20, ಏಕದಿನ ಸರಣಿಗೆ ಭಾರತ ತಂಡ ಪ್ರಕಟ - ಇಂಗ್ಲೆಂಡ್ ವಿರುದ್ಧದ ಸರಣಿಗೆ ರೋಹಿತ್ ಶರ್ಮಾ ನಾಯಕ

ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಮರು ನಿಗದಿಪಡಿಸಲಾದ 5ನೇ ಟೆಸ್ಟ್ ಪಂದ್ಯವು ಕಳೆದ ವರ್ಷದ ಐದು ಪಂದ್ಯಗಳ ಟೆಸ್ಟ್ ಸರಣಿಯ ಭಾಗವಾಗಿದೆ. ಟೀಂ ಇಂಡಿಯಾ ಆಟಗಾರರಿಗೆ ಕೋವಿಡ್​-19 ಸೋಂಕು ಕಾಣಿಕೊಂಡಿದ್ದರಿಂದ ನಾಲ್ಕನೇ ಟೆಸ್ಟ್ ನಂತರ ಸರಣಿ ಸ್ಥಗಿತವಾಗಿತ್ತು.

India announces squads for T20I, ODI series against England
India announces squads for T20I, ODI series against England

By

Published : Jul 1, 2022, 1:00 PM IST

ಮುಂಬೈ: ಐದನೇ ಟೆಸ್ಟ್ ಬಳಿಕ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟಿ-20 ಮತ್ತು ಏಕದಿನ ಸರಣಿಗೆ ಹಿರಿಯರ ಆಯ್ಕೆ ಸಮಿತಿಯು ತಂಡವನ್ನು ಆಯ್ಕೆ ಮಾಡಿದೆ. ಎರಡೂ ಸರಣಿಗಳಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಕೂಡ ಪ್ರಥಮ ಟಿ-20 ನಂತರ ತಂಡಕ್ಕೆ ಮರಳಲಿದ್ದಾರೆ.

ಜುಲೈ 7 ರಿಂದ ಪ್ರಾರಂಭವಾಗುವ ಮೂರು ಟಿ-20 ಸರಣಿಯಲ್ಲಿ ಭಾರತ ಮತ್ತು ಇಂಗ್ಲೆಂಡ್ ಪರಸ್ಪರ ಸೆಣಸಾಡಲಿವೆ. ಜುಲೈ 12 ರಿಂದ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿ ಆರಂಭವಾಗಲಿದೆ.

ಏತನ್ಮಧ್ಯೆ, ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಮರುನಿಗದಿಪಡಿಸಲಾದ 5ನೇ ಟೆಸ್ಟ್ ಪಂದ್ಯವು ಕಳೆದ ವರ್ಷದ ಐದು ಪಂದ್ಯಗಳ ಟೆಸ್ಟ್ ಸರಣಿಯ ಭಾಗವಾಗಿದೆ. ಟೀಂ ಇಂಡಿಯಾ ಆಟಗಾರರಿಗೆ ಕೋವಿಡ್​-19 ಸೋಂಕು ಕಾಣಿಕೊಂಡಿದ್ದರಿಂದ ನಾಲ್ಕನೇ ಟೆಸ್ಟ್ ನಂತರ ಸರಣಿ ಸ್ಥಗಿತವಾಗಿತ್ತು. ಈ ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆ ಸಾಧಿಸಿದೆ.

ಪ್ರಥಮ ಟಿ-20 ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆ), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್

ದ್ವಿತೀಯ ಮತ್ತು ತೃತೀಯ ಟಿ-20 ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (WK), ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಲ್, ಅಕ್ಸರ್ ಪಟೇಲ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್

3 ಏಕದಿನ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಪಟ್ಹಾಲ್, ಜೆ., ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್.

ABOUT THE AUTHOR

...view details