ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಆಸ್ಟ್ರೇಲಿಯಾದ ವಿದೇಶಾಂಗ ಸಚಿವೆ ಮರೀಸ್ ಪೇನ್ ಮತ್ತು ರಕ್ಷಣಾ ಸಚಿವರಾದ ಪೀಟರ್ ಡಟನ್ ಇಂದು ದೆಹಲಿಯಲ್ಲಿ ಭೇಟಿಯಾಗಿ 2+2 ಸಭೆ ನಡೆಸಲಿದ್ದಾರೆ.
ಈ ಸಭೆಯ ನಂತರ ಆಸ್ಟ್ರೇಲಿಯಾದ ವಿದೇಶಾಂಗ ಸಚಿವರು ಮತ್ತು ರಕ್ಷಣಾ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಲೋಕ ಕಲ್ಯಾಣ್ ಮಾರ್ಗ್ ನಿವಾಸದಲ್ಲಿ ಸಂಜೆ 4: 30ಕ್ಕೆ ಭೇಟಿ ಮಾಡುತ್ತಾರೆ.
ಆಸ್ಟ್ರೇಲಿಯಾದೊಂದಿಗೆ 2+2 ಸಭೆಯನ್ನು ನಡೆಸಲಾಗುತ್ತಿದ್ದು, ಕೆಲವು ವರ್ಷಗಳಿಂದ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ಸಂಬಂಧಗಳಲ್ಲಿ ಆದ ಬದಲಾವಣೆಯನ್ನು ಸೂಚಿಸುತ್ತದೆ ಎಂದು ಮೂಲವೊಂದು ಮಾಹಿತಿ ನೀಡಿದೆ.
ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಪುಷ್ಪಾರ್ಚನೆ ಮಾಡಿದ ನಂತರ ಪೇನ್ 10:30ಕ್ಕೆ ಹೈದರಾಬಾದ್ ಹೌಸ್‌ನಲ್ಲಿ ಜೈಶಂಕರ್ ಅವರನ್ನು ಭೇಟಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆ ವೇಳೆಗೆ ಜವಾಹರಲಾಲ್ ನೆಹರು ಭವನದ ಮುತ್ತಮ್ಮ ಸಭಾಂಗಣದಲ್ಲಿ ಮರೀಸ್ ಪೇನ್ ಮಾಧ್ಯಮಗೋಷ್ಟಿ ನಡೆಸಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ಸಂಬಂಧದ ವಿಚಾರವಾಗಿ ಈ ಮಾಧ್ಯಮಗೋಷ್ಟಿ ಮಹತ್ವ ಪಡೆದುಕೊಳ್ಳಲಿದೆ.
ಶುಕ್ರವಾರ ದೆಹಲಿ ಮೂಲದ ಅಬ್ಸರ್ವರ್ ರಿಸರ್ಚ್ ಫೌಂಡೇಶನ್ (ORF) ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಪೇನ್, ಭಾರತ ಮತ್ತು ಆಸ್ಟ್ರೇಲಿಯಾ ದೇಶಗಳ ಪಾಲುದಾರಿಕೆಯ ಮೊದಲ ವರ್ಷದಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸಿವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಅಮರುಲ್ಲಾ ಸಲೇಹ್ ಸೋದರನಿಗೆ ಚಿತ್ರಹಿಂಸೆ ನೀಡಿ ಗಲ್ಲಿಗೇರಿಸಿದ ತಾಲಿಬಾನ್