ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹಗುರ ಯುದ್ಧ ವಿಮಾನ (ಎಲ್‌ಸಿಎ)ದ ಎರಡನೇ ತಯಾರಿಕಾ ಕಾರ್ಯಕ್ಷೇತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಉದ್ಘಾಟಿಸಿದರು. ಭಾರತವು ತನ್ನ ಗಡಿಗಳನ್ನು ಕಾಪಾಡಿಕೊಳ್ಳಲು ಇತರ ದೇಶಗಳ ಮೇಲೆ ಅವಲಂಬಿತವಾಗಿರಲು ಸಾಧ್ಯವಿಲ್ಲ ಎಂದು ಇದೇ ವೇಳೆ ಹೇಳಿದರು.
"ನಮ್ಮ ದೇಶದ ರಕ್ಷಣೆಗಾಗಿ ನಾವು ಇತರ ದೇಶಗಳ ಮೇಲೆ ಹೆಚ್ಚು ಅವಲಂಬಿತವಾಗಿರಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಎಚ್ಎಎಲ್ಗೆ ಇನ್ನೂ ಬೇಡಿಕೆ ಹೆಚ್ಚಾಗಲಿದೆ" ಎಂದು ಸಿಂಗ್ ಭರವಸೆ ವ್ಯಕ್ತಪಡಿಸಿದ್ರು.
"ಕೊರೊನಾ ಸಾಂಕ್ರಾಮಿಕ ರೋಗದ ನಡುವೆಯೂ ಎಚ್‌ಎಎಲ್ ಸಶಸ್ತ್ರ ಪಡೆಗಳಿಂದ 48,000 ಕೋಟಿ ರೂ. ಆರ್ಡರ್ಗಳನ್ನು ಪಡೆದಿದೆ. ಇದು ಸ್ಥಳೀಯ ರಕ್ಷಣಾ ಸಂಗ್ರಹದ ದೃಷ್ಟಿಯಿಂದ ಅತಿದೊಡ್ಡ ಸಂಗ್ರಹವಾಗಿದೆ. ಇದು ಭಾರತೀಯ ಏರೋಸ್ಪೇಸ್ ಕ್ಷೇತ್ರಕ್ಕೆ ಹೊಸ ಆಯಾಮ ನೀಡುತ್ತದೆ" ಎಂದು ರಕ್ಷಣಾ ಸಚಿವರು ಹೇಳಿದರು.