ಕರ್ನಾಟಕ

karnataka

ETV Bharat / bharat

ಲಡಾಖ್​ನಲ್ಲಿ ಶಾಂತಿ ಸ್ಥಾಪನೆ: ಮತ್ತೊಂದು ಸುತ್ತಿನ ಮಾತುಕತೆಗೆ ಭಾರತ - ಚೀನಾ ಒಪ್ಪಿಗೆ - ಭಾರತ ಚೀನಾ ನಡುವೆ ಮಾತುಕತೆ

ಹಿರಿಯ ಕಮಾಂಡರ್‌ಗಳ ಮತ್ತೊಂದು ಸುತ್ತಿನ ಸಭೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

India, China continue to maintain communication
ಮತ್ತೊಂದು ಸುತ್ತಿನ ಮಾತುಕತೆಗೆ ಭಾರತ - ಚೀನಾ ಒಪ್ಪಿಗೆ

By

Published : Dec 4, 2020, 4:42 AM IST

ನವದೆಹಲಿ: ಲಡಾಖ್‌ನ ಎಲ್‌ಎಸಿಯ ಉದ್ದಕ್ಕೂ ಶಾಂತಿ ಸ್ಥಾಪನೆಗಾಗಿ ಭಾರತ ಮತ್ತು ಚೀನಾ ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಸಂವಹನವನ್ನು ಮುಂದುವರೆಸಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಹಿರಿಯ ಕಮಾಂಡರ್‌ಗಳ ಮತ್ತೊಂದು ಸುತ್ತಿನ ಸಭೆಗೆ ಎರಡೂ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ತಿಳಿಸಿದ್ದಾರೆ.

"ಎಲ್‌ಎಸಿಯ ಉದ್ದಕ್ಕೂ ಸಂಪೂರ್ಣ ನಿಷ್ಕ್ರಿಯತೆಯನ್ನು ಖಾತರಿಪಡಿಸುವ ಮತ್ತು ಶಾಂತಿ ಸ್ಥಾಪನೆಗಾಗಿ ರಾಜತಾಂತ್ರಿಕ ಮತ್ತು ಮಿಲಿಟರಿ ಮಾರ್ಗಗಳ ಮೂಲಕ ಉಭಯ ದೇಶಗಳು ಸಂವಹನವನ್ನು ಮುಂದುವರಿಸಲಿವೆ. ಸೂಕ್ತ ಸಮಯದಲ್ಲಿ ಮತ್ತೊಂದು ಸುತ್ತಿನ ಹಿರಿಯ ಕಮಾಂಡರ್‌ಗಳ ಸಭೆ ನಡೆಸಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿವೆ" ಎಂದಿದ್ದಾರೆ.

ಯುಎಇಯಲ್ಲಿನ ಭಾರತೀಯ ಕಾರ್ಮಿಕರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀವಾಸ್ತವ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಭೇಟಿಯು ಉಭಯ ದೇಶಗಳ ನಡುವಿನ ನಿಕಟ ಸ್ನೇಹವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ಭಾರತೀಯ ಸಮುದಾಯವನ್ನು ನೋಡಿಕೊಂಡಿದ್ದಕ್ಕಾಗಿ ಯುಎಇಗೆ ಜೈಶಂಕರ್ ಧನ್ಯವಾದ ಅರ್ಪಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

"ಭಾರತ ಮತ್ತು ಯುಎಇ ನಡುವೆ ಏರ್​ ಬಬಲ್ ವ್ಯವಸ್ಥೆ ಜಾರಿಯಲ್ಲಿದೆ. ಕೋವಿಡ್-19 ನಿರ್ಬಂಧಗಳು ಮತ್ತು ಅದರ ಪರಿಣಾಮವಾಗಿ ಉಂಟಾದ ಆರ್ಥಿಕ ಸಮಸ್ಯೆಗಳ ಹೊರತಾಗಿಯೂ ಹೆಚ್ಚಿನ ಸಂಖ್ಯೆಯ ಭಾರತೀಯರು ಯುಎಇಗೆ ಹಿಂದಿರುಗಲು ಸಾಧ್ಯವಾಯಿತು ಎಂದು ಎರಡೂ ದೇಶಗಳು ತೃಪ್ತಿ ವ್ಯಕ್ತಪಡಿಸಿವೆ" ಎಂದು ಶ್ರೀವಾಸ್ತವ ಹೇಳಿದ್ದಾರೆ.

ABOUT THE AUTHOR

...view details