ನವದೆಹಲಿ:ಕರ್ನಾಟಕದ ಹಿಜಾಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಯಾವುದೇ ರಾಷ್ಟ್ರವೂ ನಮ್ಮ ದೇಶದ ಆಂತರಿಕ ವಿಚಾರದಲ್ಲಿ ತಲೆ ಹಾಕಬಾರದೆಂದು ಕೆಲವು ದಿನಗಳ ಹಿಂದೆ ಭಾರತ ಸರ್ಕಾರ ಸೂಚನೆ ನೀಡಿತ್ತು. ಆದರೆ ಇಸ್ಲಾಮಿಕ್ ಸಹಕಾರ ಸಂಘಟನೆ (ಓಐಸಿ) ದೇಶದ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭಾರತದ ಅಸಮಾಧಾನಕ್ಕೆ ಕಾರಣವಾಗಿದೆ.
ತಮ್ಮ ದೇಶದಲ್ಲಿರುವ ಮುಸ್ಲಿಂ ಸಮುದಾಯದ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ಭಾರತವನ್ನು ಮತ್ತೆ ಒತ್ತಾಯಿಸುತ್ತಿದ್ದೇವೆ. ಮುಸ್ಲಿಂ ಸಮುದಾಯದ ವಿರುದ್ಧ ಹಿಂಸಾಚಾರ ನಡೆಸುವವರ ಮತ್ತು ದ್ವೇಷ ಪ್ರಚೋದಿಸುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತೇವೆ ಎಂದು ಇಸ್ಲಾಮಿಕ್ ಸಹಕಾರ ಸಂಘಟನೆ ಟ್ವೀಟ್ ಮಾಡಿದೆ.