ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 24,354 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,37,91,061ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಮಹಾಮಾರಿ ಸೋಂಕಿಗೆ ಶುಕ್ರವಾರ 234 ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಒಟ್ಟು 4,48,573 ಜನರು ಕೋವಿಡ್ನಿಂದ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,73,889 ಸಕ್ರಿಯ ಪ್ರಕರಣಗಳಿದ್ದು, 3,30,68,599 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.
ಇನ್ನು ಶುಕ್ರವಾರ14,29,258 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೆ 57,19,94,990 ಜನರನ್ನು ಪರೀಕ್ಷಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದೇಶದ ಎಲ್ಲ ರಾಜ್ಯಗಳಿಗೆ ಹೋಲಿಸಿದರೆ ಕೇರಳದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 13,834 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 95 ಜನ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಅಫ್ಘಾನಿಸ್ತಾನ ತಾಲಿಬಾನ್ ವಶವಾಗುತ್ತಿದ್ದಂತೆ, ಜಮ್ಮು ಕಾಶ್ಮೀರದಲ್ಲಿ ಉಗ್ರರ ಸಂಖ್ಯೆ ಹೆಚ್ಚಳ: ವರದಿ