ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,436 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ 9,436 ಹೊಸ ಕೋವಿಡ್ ಕೇಸ್ ಪತ್ತೆ, 30 ಮಂದಿ ಸಾವು - ಕೋವಿಡ್ ಪ್ರಕರಣಗಳ ವಿವರ
ದೇಶದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳ ವಿವರ ಹೀಗಿದೆ.
ಸಾಂದರ್ಭಿಕ ಚಿತ್ರ
ಸದ್ಯ ದೇಶದಲ್ಲಿ 86,591ಸಕ್ರಿಯ ಪ್ರಕರಣಗಳಿವೆ. ನಿನ್ನೆ 30 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,27,754ಕ್ಕೆ ಏರಿಕೆಯಾಗಿದೆ. ಈಗಿನ ಒಟ್ಟು ಚೇತರಿಕೆಯ ಪ್ರಮಾಣ ಶೇ.98.62 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ. 2.93 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ 2.70 ರಷ್ಟಿದೆ. ನಿನ್ನೆ 9,999 ಮಂದಿ ಚೇತರಿಸಿಕೊಂಡಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ಲಸಿಕಾಭಿಯಾನದಡಿ ಈವರೆಗೆ 211.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ:ನೋಯ್ಡಾ ಅವಳಿ ಕಟ್ಟಡಗಳ ಬಳಿ ನಿಂತು ಕೊನೆಯ ಬಾರಿ ಫೋಟೋ ಕ್ಲಿಕ್ಕಿಸಿಕೊಂಡ ಸ್ಥಳೀಯರು