ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,586 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 44,345,880ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 96,506 ಸಕ್ರಿಯ ಪ್ರಕರಣಗಳಿವೆ. ನಿನ್ನೆ 48 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,27,416ಕ್ಕೆ ಏರಿಕೆಯಾಗಿದೆ. ಈಗಿನ ಒಟ್ಟು ಚೇತರಿಕೆಯ ಪ್ರಮಾಣ ಶೇ.98.59 ರಷ್ಟಿದೆ.