ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಿಂದಿನ ದಿನಕ್ಕಿಂತ ಸ್ವಲ್ಪ ಏರಿಕೆ ಕಂಡಿದೆ. ಸೋಮವಾರ ಸುಮಾರು 6,822 ಮಂದಿ ಸೋಂಕಿತರು ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 8,439 ಸೋಂಕಿತರು ಕಂಡುಬಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಒಂದೇ ದಿನದಲ್ಲಿ 9,525 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,40,89,137 ಮಂದಿ ಸೋಂಕಿನಿಂದ ಗುಣಮುಖ ಹೊಂದಿದ್ದಾರೆ. ಗುಣಮುಖರಾಗುವವರ ಪ್ರಮಾಣ 98.36ರಷ್ಟಿದ್ದು, ಇದು ಮಾರ್ಚ್ 2020ಕ್ಕಿಂತ ಹೆಚ್ಚಿದೆ ಎಂದು ಆರೋಗ್ಯ ಇಲಾಖೆಯ ಮಾಹಿತಿಯಾಗಿದೆ.
ದೇಶದಲ್ಲಿ ಸಕ್ರಿಯ ಸೋಂಕಿತರು ಒಟ್ಟು 93,773 ಮಂದಿ ಇದ್ದು, ಈ ಸೋಂಕಿತರ ಸಂಖ್ಯೆ ಹಿಂದಿನ 555 ದಿನಗಳಲ್ಲೇ ಅತ್ಯಂತ ಕಡಿಮೆ. ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 0.27ರಷ್ಟು ಮಂದಿ ಮಾತ್ರ ಸಕ್ರಿಯ ಸೋಂಕಿತರಿದ್ದಾರೆ.