ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರಗತಿಯಲ್ಲಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,166 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 302 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದಿನವೊಂದಕ್ಕೆ ಸೋಂಕು ಕಾಣಿಸುವವರ ಪ್ರಮಾಣ ಶೇಕಡಾ 1.28ರಷ್ಟಿದ್ದು, ಈಗ ದೇಶದಲ್ಲಿ ಒಟ್ಟು 1,34,235 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ಈವರೆಗೆ ಕಾಣಿಸಿಕೊಂಡಿರುವ ಒಟ್ಟು ಸೋಂಕಿತರಲ್ಲಿ ಶೇಕಡಾ 0.31ರಷ್ಟು ಮಂದಿ ಸಕ್ರಿಯ ಸೋಂಕಿತರಿದ್ದಾರೆ.
ಕಳೆದ 24 ಗಂಟೆಯಲ್ಲಿ 26,988 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,22,46,884 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಂದರೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 98.49ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ದೃಢಪಡಿಸಿವೆ.