ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಸ್ವಲ್ಪ ಪ್ರಮಾಣದ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 67,597 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 1,188 ಮಂದಿಗೆ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,80,456 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,08,40,658 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ
ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 96.46ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 5,04,062 ಮಂದಿ ಮೃತಪಟ್ಟಿದ್ದಾರೆ.