ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,135 ಹೊಸ ಕೇಸ್ಗಳು ದೃಢಪಟ್ಟಿದ್ದು, 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ದಿನಕ್ಕೆ ಹೋಲಿಸಿದರೆ 2,153 ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 13,958 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,28,79,477 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,13,864 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,223 ಕ್ಕೆ ಏರಿಕೆಯಾಗಿದೆ.