ಕರ್ನಾಟಕ

karnataka

ETV Bharat / bharat

24 ಗಂಟೆಗಳಲ್ಲಿ 6,563 ಕೋವಿಡ್ ಸೋಂಕಿತರು ಪತ್ತೆ.. ಒಮಿಕ್ರಾನ್ ಕೇಸ್​ಗಳ ಸಂಖ್ಯೆ 153 ಕ್ಕೆ ಏರಿಕೆ

India Covid Report: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 6,563 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, ಭಾರತದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್​ ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ.

India COVID
India COVID

By

Published : Dec 20, 2021, 11:18 AM IST

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 6,563 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 132 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಸದ್ಯಕ್ಕೆ ಒಟ್ಟು 82,267 ಸಕ್ರಿಯ ಪ್ರಕರಣಗಳಿವೆ. ಕಳೆದ 572 ದಿನಗಳಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಶೇಕಡಾ ದರ 0.24ರಷ್ಟಿದೆ. ಜೊತೆಗೆ ನಿನ್ನೆ 132 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,77,554 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 8,077 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,41,87,017 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.39 ರಷ್ಟಿದೆ.

ಇಂದಿನ ಕೊರೊನಾ ವರದಿ

ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 1,37,67, 20, 359 ಕ್ಕೂ ಅಧಿಕ ಲಸಿಕಾ ಡೋಸ್‌ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 15,82,079 ಡೋಸ್​ ವ್ಯಾಕ್ಸಿನ್​ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Omicron cases in India : ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಆತಂಕ ಮೂಡಿಸಿದೆ. ಈಗಾಗಲೇ ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಕರ್ನಾಟಕ, ಕೇರಳ, ನವದೆಹಲಿ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ದೃಢಪಟ್ಟಿವೆ. ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ನಿನ್ನೆ (ಭಾನುವಾರ) ಮಹಾರಾಷ್ಟ್ರದಲ್ಲಿ ಆರು ಮತ್ತು ಗುಜರಾತ್‌ನಲ್ಲಿ ನಾಲ್ಕು ಹೊಸ ಒಮಿಕ್ರಾನ್​ ಕೊರೊನಾವೈರಸ್ ಪ್ರಕರಣಗಳು ವರದಿಯಾದ ನಂತರ ಭಾರತದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ.

ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್​ ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ (54), ದೆಹಲಿ (22), ರಾಜಸ್ಥಾನ (17) ಮತ್ತು ಕರ್ನಾಟಕ (14), ತೆಲಂಗಾಣ (20), ಗುಜರಾತ್ (11), ಕೇರಳ (11), ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳದಲ್ಲಿ (1) ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರದಲ್ಲಿ ಭಾನುವಾರ ಆರು ಮಂದಿ ಒಮಿಕ್ರಾನ್​ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 54 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಂಡುಬಂದ 54 ಪ್ರಕರಣಗಳಲ್ಲಿ 22 ಮುಂಬೈನಲ್ಲಿ ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ABOUT THE AUTHOR

...view details