ಕರ್ನಾಟಕ

karnataka

ETV Bharat / bharat

ಭಾರತದಲ್ಲಿ 2,828 ಹೊಸ ಕೋವಿಡ್​​ ಕೇಸ್​​ ಪತ್ತೆ, 14 ಮಂದಿ ಸಾವು - ಕೋವಿಡ್​​ 19 ಅಪ್ಡೇಟ್​​

ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ.

covid 19 report
ಸಾಂದರ್ಭಿಕ ಚಿತ್ರ

By

Published : May 29, 2022, 9:39 AM IST

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,828 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,53,043ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 14 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,586 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ. 0.60 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.49 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.75. ಸದ್ಯ ದೇಶದಲ್ಲಿ 17,087 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಶನಿವಾರ) 2,035 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,11,370 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 193.28 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ 196 ಮಂದಿಗೆ ಕೋವಿಡ್ ಸೋಂಕು.. ಸಾವು ಶೂನ್ಯ

ABOUT THE AUTHOR

...view details