ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,678 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕಳೆದ 24 ಗಂಟೆಯೊಳಗೆ 26 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆಯನ್ನು 5,25,428ಕ್ಕೆ ಏರಿಕೆಯಾಗಿದೆ. ಭಾನುವಾರಕ್ಕೆ ಹೋಲಿಸಿದರೆ, ಶೇ 8ರಷ್ಟು ಕಡಿಮೆ ಪ್ರಕರಣಗಳು ದಾಖಲಾಗಿವೆ.
ಸದ್ಯ ದೇಶದಲ್ಲಿ 1,30,713 ಸಕ್ರಿಯ ಪ್ರಕರಣಗಳಿವೆ. ನಿನ್ನೆ ದೇಶದಾದ್ಯಂತ 14,629 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,29,83,162ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ದರ ಶೇ. 98.50 ರಷ್ಟಿದೆ.