ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,531 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,16,861ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ 26 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ ಮೃತಪಟ್ಟ 26 ಜನರ ಪೈಕಿ 10 ಸಾವುಗಳು ಕೇರಳದಲ್ಲಿ ವರದಿಯಾಗಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ.98.59 ರಷ್ಟಿದ್ದರೆ, ಸಕ್ರಿಯ ಪ್ರಕರಣ ದರ ಶೇ. 0.22 ಇದೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ 4.15% ಇದೆ.