ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 5,664 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲೀಗ 47,922 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 4,555 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಒಟ್ಟು ಚೇತರಿಕೆಯ ಪ್ರಮಾಣ ಶೇ 98.71 ರಷ್ಟಿದೆ.
ದೇಶದಲ್ಲಿ 47,922 ಕ್ಕೇರಿದ ಸಕ್ರಿಯ ಪ್ರಕರಣಗಳ ಸಂಖ್ಯೆ: 5,664 ಹೊಸ ಕೋವಿಡ್ ಕೇಸ್ ಪತ್ತೆ - ದೈನಂದಿನ ಪಾಸಿಟಿವಿಟಿ ದರ
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ದಾಖಲಾದ ಹೊಸ ಕೋವಿಡ್ 19 ಪ್ರಕರಣಗಳು, ಗುಣಮುಖರಾದವರು ಹಾಗು ವ್ಯಾಕ್ಸಿನೇಷನ್ ಮಾಹಿತಿ ಇಲ್ಲಿದೆ.
covid 19
ಸದ್ಯಕ್ಕೆ ದೈನಂದಿನ ಪಾಸಿಟಿವಿಟಿ ದರವು 1.96 % ಇದ್ದು, ಸಾವಿನ ಪ್ರಮಾಣವು 1.19 % ಇದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 216.56 ಕೋಟಿ ಕೋವಿಡ್ ಲಸಿಕಾ ಡೋಸ್ ನೀಡಲಾಗಿದೆ. ಕಳೆದೊಂದು ದಿನದಲ್ಲಿ 14,84,216 ಡೋಸ್ ವ್ಯಾಕ್ಸಿನ್ ನೀಡಲಾಗಿದೆ.
ಇದನ್ನೂ ಓದಿ:ಮಹಮ್ಮದ್ ಶಮಿಗೆ ಕೋವಿಡ್: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಔಟ್, ಉಮೇಶ್‌ಗೆ ಸ್ಥಾನ