ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,364 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,29,563 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ನಿನ್ನೆ ದಾಖಲಾದ ಪ್ರಕರಣಗಳಿಗಿಂತ ಇಂದು ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ.
ದೇಶಾದ್ಯಂತ ಕಳೆದೊಂದು ದಿನದಲ್ಲಿ 10 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,303 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.50% ರಷ್ಟಿದ್ದು, ಚೇತರಿಕೆಯ ಪ್ರಮಾಣ ಶೇ. 98.75 ರಷ್ಟಿದೆ. ಸದ್ಯಕ್ಕೆ ದೇಶದಲ್ಲಿ 15,419 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,582 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,89,841 ಮಂದಿ ಗುಣಮುಖರಾಗಿದ್ದಾರೆ.