ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,866 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,39,05,621 ಕ್ಕೆ ಏರಿಕೆಯಾಗಿದೆ. ಭಾನುವಾರ ದಾಖಲಾದ ಕೇಸ್ಗಳಿಗಿಂತ ಇಂದು 3,413 ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ 5,26,074ಕ್ಕೆ ತಲುಪಿದೆ. ಸದ್ಯಕ್ಕೆ ದೇಶದಲ್ಲಿ 1,50,877 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ.98.46 ರಷ್ಟಿದ್ದರೆ, ಸಾವಿನ ದರ ಶೇ.1.20 ಇದೆ.
ನಿನ್ನೆ 18,148 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,32,28,670 ಕ್ಕೆ ತಲುಪಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 2,02,17,66,615 ಲಸಿಕಾ ಡೋಸ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 16,82,390 ಡೋಸ್ ವ್ಯಾಕ್ಸಿನ್ ನೀಡಲಾಗಿದ್ದು, 3,83,657 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಗರಿಷ್ಠ ಪ್ರಕರಣಗಳು ದಾಖಲಾದ ಮೊದಲ 5 ರಾಜ್ಯಗಳು:ಕೇರಳದಲ್ಲಿ 2,021 ಪ್ರಕರಣಗಳು, ಮಹಾರಾಷ್ಟ್ರ 2,015, ತಮಿಳುನಾಡು 1,945, ಪಶ್ಚಿಮ ಬಂಗಾಳ 1,817 ಮತ್ತು ಕರ್ನಾಟಕದಲ್ಲಿ 1,151 ಪ್ರಕರಣಗಳು ದೃಢಪಟ್ಟಿವೆ.