ನವದೆಹಲಿ: ಭಾನುವಾರ ಬೆಳಗ್ಗೆ 8ಗಂಟೆಯವರೆಗಿನ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,14,460 ಹೊಸ ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ. 1,89,232 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2677 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿಅಂಶ:
ದೇಶದಲ್ಲಿ ಈವರೆಗೆ ಒಟ್ಟು 2,88,09,339 ಕೊರೊನಾ ಪ್ರಕರಣ ದಾಖಲಾಗಿವೆ. 2,69,84,781 ಸೋಂಕಿತರು ಗುಣಮುಖರಾಗಿದ್ದಾರೆ. 3,46,759 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 14,77,799 ಸಕ್ರಿಯ ಕೋವಿಡ್ ಪ್ರಕರಣಗಳಿವೆ.