ನವದೆಹಲಿ:ಭಾರತದಲ್ಲಿ ಹೊಸದಾಗಿ 37,875 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,30,96,718ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 369 ಜನರು ವೈರಸ್ಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,41,411 ಆಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಪ್ರಕಾರ, ಈವರೆಗೆ 3,22,64,051 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಸದ್ಯ ದೇಶದಲ್ಲಿ 3,91,256 ಸಕ್ರಿಯ ಪ್ರಕರಣಗಳಿವೆ.