ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 15,823 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3,40,01,743 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 226 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 4,51,189 ಕ್ಕೆ ಏರಿಕೆಯಾಗಿದೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 7,823 ಹೊಸ ಪ್ರಕರಣಗಳು ದೃಢಪಟ್ಟಿದ್ದು, 106 ಮಂದಿ ಸಾವನ್ನಪ್ಪಿದ್ದಾರೆ.
ಕಳೆದ 24 ಗಂಟೆಗಳಲ್ಲಿ 22,844 ಸೋಂಕಿತರು ಕೊರೊನಾದಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 3,33,42,901 ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ 98.06 ಇದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಲ್ಲಿ 2,07,653 ಸಕ್ರಿಯ ಪ್ರಕರಣಗಳಿದ್ದು, ಕಳೆದ 214 ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಲಸಿಕೆ ನೀಡುವ ಕಾರ್ಯ ಸಹ ಭರದಿಂದ ಸಾಗುತ್ತಿದ್ದು, ಈವರೆಗೆ 96.43 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಕಾರ, ಅಕ್ಟೋಬರ್ 12 ರವರೆಗೆ ಒಟ್ಟು 58.63 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಮಂಗಳವಾರ 13,25,399 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.