ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 11,610 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 100 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,09,37,320 ಕ್ಕೆ ಹಾಗೂ ಮೃತರ ಸಂಖ್ಯೆ 1,55,913ಕ್ಕೆ ಏರಿಕೆಯಾಗಿದೆ.
11,833 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 1,06,44,858 ಜನ ಗುಣಮುಖರಾಗಿದ್ದಾರೆ. ಉಳಿದಂತೆ 1,36,549 ಕೇಸ್ಗಳು ಸಕ್ರಿಯವಾಗಿವೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.