ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,710 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4,31,47,530 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶಾದ್ಯಂತ ಕಳೆದೊಂದು ದಿನದಲ್ಲಿ 14 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,539 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.0.58 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.52ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ.98.75 ಇದೆ. ದೇಶದಲ್ಲಿ15,814 ಸಕ್ರಿಯ ಪ್ರಕರಣಗಳಿವೆ.