ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಇಳಿಕೆ ಕಂಡ ಕೋವಿಡ್​: ಹೊಸ ಸೋಂಕಿತರಿಗಿಂತ ಚೇತರಿಸಿಕೊಂಡವರ ಸಂಖ್ಯೆಯೇ ಹೆಚ್ಚು - Active COVID-19 cases in country

ಕೋವಿಡ್ ​19 ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,929 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, 392 ಮಂದಿ ಮೃತಪಟ್ಟಿದ್ದಾರೆ.

COVID
COVID

By

Published : Nov 6, 2021, 10:10 AM IST

Updated : Nov 7, 2021, 2:38 PM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,929 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,43,44,683 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಸದ್ಯಕ್ಕೆ ಭಾರತದಲ್ಲಿ 1,46,950 ಸಕ್ರಿಯ ಪ್ರಕರಣಗಳಿವೆ. ನಿನ್ನೆ 12,509 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 3,27,37,468 ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 98.23 ಇದೆ.

ಮಹಾಮಾರಿ ಸೋಂಕಿಗೆ ಶುಕ್ರವಾರ 392 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 4,60,265 ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ ಲಸಿಕಾ ಅಭಿಯಾನ ನಿರಂತರವಾಗಿ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 20,75,942 ಕೋವಿಡ್​ ಲಸಿಕಾ ಡೋಸ್‌ ನೀಡಲಾಗಿದ್ದು, ಈವರೆಗೆ ಒಟ್ಟು 1,07,92,19,546 ಡೋಸ್‌ ವ್ಯಾಕ್ಸಿನ್​ ವಿತರಿಸಲಾಗಿದೆ.

Last Updated : Nov 7, 2021, 2:38 PM IST

ABOUT THE AUTHOR

...view details