ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 41,506 COVID ಕೇಸ್ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ಒಟ್ಟು 41,526 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ 41,506 ಹೊಸ COVID ಕೇಸ್ಗಳು ಪತ್ತೆ: 895 ಮಂದಿ ಬಲಿ - ಕೊರೊನಾ ಸಂಬಂಧಿತ ಸುದ್ದಿ
ಭಾರತದಲ್ಲಿ ಈವರೆಗೆ 2,99,75,064 ಮಂದಿ ಚೇತರಿಸಿಕೊಂಡಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 41,506 COVID ಕೇಸ್ಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಕೋವಿಡ್ ಕೇಸ್
ಭಾರತದಲ್ಲಿ ಈವರೆಗೆ 2,99,75,064 ಮಂದಿ ಚೇತರಿಸಿಕೊಂಡಿದ್ದಾರೆ. ಇಲ್ಲಿಯ ತನಕ 4,08,040 ಮಂದಿ ಸೋಂಕಿತರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಸೋಂಕಿಗೆ 895 ಮಂದಿ ಕೊನೆಯುಸಿರೆಳೆದಿದ್ದಾರೆ.
ದೇಶದಲ್ಲಿ ಒಟ್ಟು 4,54,118 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಇದುವರೆಗೆ 37,60,32,586 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.