ಕರ್ನಾಟಕ

karnataka

ETV Bharat / bharat

Covid-19 Update: ಕಳೆದ 24 ಗಂಟೆಯಲ್ಲಿ 39,070 ಹೊಸ ಕೊರೊನಾ ಪ್ರಕರಣ ಪತ್ತೆ - ಕೊರೊನಾ ಅಪ್​ಡೇಟ್​

ದೇಶದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ನಿನ್ನೆಗಿಂತ ಇಂದು ಹೆಚ್ಚಾಗಿದೆ. ಆದರೆ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಪ್ರಸ್ತುತ 4,06,822 ಸಕ್ರಿಯ ಪ್ರಕರಣಗಳಿವೆ.

Covid-19 Update
ಕೋವಿಡ್ ಪ್ರಕರಣ

By

Published : Aug 8, 2021, 10:15 AM IST

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 39,070 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 43,910 ಮಂದಿ ಗುಣಮುಖರಾಗಿದ್ದಾರೆ ಮತ್ತು 491 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಇದುವರೆಗೆ ದಾಖಲಾದ ಒಟ್ಟು ಪ್ರಕರಣ ಸಂಖ್ಯೆ 3,19,34,455 ಆಗಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,06,822 ಇದ್ದು, ಇದುವರೆಗೆ 3,10,99,771 ಮಂದಿ ಸೋಂಕು ಮುಕ್ತರಾಗಿದ್ದಾರೆ. 4,27,862 ಮಂದಿ ಮೃತಪಟ್ಟಿದ್ದಾರೆ.

ಕಳೆದ 24 ಗಂಟೆಯಲ್ಲಿ 55,91,657 ಮಂದಿಗೆ ಲಸಿಕೆ ನೀಡಲಾಗಿದೆ. ಇದುವರೆಗೆ ಒಟ್ಟು 50,68,10,492 ಮಂದಿ ಲಸಿಕೆ ಪಡೆದಿದ್ದಾರೆ.

ABOUT THE AUTHOR

...view details