ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,912 ಮಂದಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,63,337ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲೀಗ 44,436 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 38 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಈ ಪೈಕಿ ಕೇರಳದಲ್ಲಿ 19 ಮಂದಿ ಬಲಿಯಾಗಿದ್ದಾರೆ. ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,28,487 ಕ್ಕೆ ತಲುಪಿದೆ.
ಇದನ್ನೂ ಓದಿ:ಕೋವಿಶೀಲ್ಡ್ನಿಂದ ಪುರುಷರ ಫಲವತ್ತತೆಗೆ ತೊಂದರೆ ಇಲ್ಲ: ಮಣಿಪಾಲ ವೈದ್ಯರ ಸಂಶೋಧನೆ
ನಿನ್ನೆ 5,719 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,39,90,414 ಕ್ಕೆ ಏರಿಕೆಯಾಗಿದ್ದು, ಚೇತರಿಕೆಯ ಪ್ರಮಾಣ ಶೇ 98.71 ರಷ್ಟಿದೆ. ಸದ್ಯಕ್ಕೆ ದೈನಂದಿನ ಪಾಸಿಟಿವಿಟಿ ದರವು 1.62 % ಇದ್ದು, ಸಾವಿನ ಪ್ರಮಾಣವು 1.19 % ಇದೆ.
ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 2,17,41,04,791 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಕಳೆದೊಂದು ದಿನದಲ್ಲಿ 14,76,840 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,03,888 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 89,33,52,145 ತಲುಪಿದೆ.
ಇದನ್ನೂ ಓದಿ:ಸೆಪ್ಟೆಂಬರ್ 30ರವರೆಗೆ ಮಾತ್ರ ಉಚಿತ ಬೂಸ್ಟರ್ ಡೋಸ್: ಡಾ ವೀಣಾ