ನವದೆಹಲಿ:206 ದಿನಗಳಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಸೋಂಕು ಪ್ರಕರಣಗಳು ಪತ್ತೆಯಾಗಿವೆ.ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,740 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,39,35,309 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಮಹಾಮಾರಿ ಸೋಂಕಿಗೆ ನಿನ್ನೆ 248 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 4,50,375 ಜನರು ಮಾರಕ ಸೋಂಕಿಗೆ ಮೃತಪಟ್ಟಿದ್ದಾರೆ. ಸದ್ಯಕ್ಕೆ 2,36,643 ಸಕ್ರಿಯ ಪ್ರಕರಣಗಳಿದ್ದು, ಕಳೆದ 206 ದಿನಕ್ಕೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ.