ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಹೊಸದಾಗಿ 5,326 ಸೋಂಕಿತರು: 202ಕ್ಕೆ ಏರಿದ ಒಮಿಕ್ರಾನ್ ಪ್ರಕರಣ ಸಂಖ್ಯೆ - ಭಾರತದಲ್ಲಿ ಸೋಂಕು ಪರೀಕ್ಷೆ ಪ್ರಮಾಣ

India covid daily update report: ದೇಶದಲ್ಲಿ ದಿನವೊಂದಕ್ಕೆ ಕಾಣಿಸಿಕೊಳ್ಳುವ ಕೋವಿಡ್ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 202ಕ್ಕೆ ಏರಿಕೆಯಾಗಿದೆ.

India covid update report
ದೇಶದಲ್ಲಿ ಹೊಸದಾಗಿ ಆರೂವರೆ ಸಾವಿರ ಸೋಂಕಿತರು: 202ಕ್ಕೆ ಏರಿದ ಒಮಿಕ್ರಾನ್

By

Published : Dec 21, 2021, 11:46 AM IST

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸೋಮವಾರಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಸೋಮವಾರ ಸುಮಾರು 6,563 ಮಂದಿ ಸೋಂಕಿತರು ಕಂಡು ಬಂದಿದ್ದು, ಕಳೆದ 24 ಗಂಟೆಯಲ್ಲಿ 5,326 ಸೋಂಕಿತರು ಪತ್ತೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 8,043 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 3,41,95,060 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗುವವರ ಪ್ರಮಾಣ ಶೇಕಡಾ 98.40ರಷ್ಟಿದ್ದು, ಇದು ಮಾರ್ಚ್​ 2020ಕ್ಕಿಂತ ಹೆಚ್ಚಿದೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ದೃಢಪಡಿಸಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು ಒಟ್ಟು 79,097 ಮಂದಿ ಇದ್ದು, ಈ ಸೋಂಕಿತರ ಸಂಖ್ಯೆ ಹಿಂದಿನ 574 ದಿನಗಳಲ್ಲೇ ಅತ್ಯಂತ ಕಡಿಮೆ. ಈಗ ಒಟ್ಟು ಸೋಂಕಿತರಲ್ಲಿ ಶೇಕಡಾ 0.23ರಷ್ಟು ಮಂದಿ ಮಾತ್ರ ಸಕ್ರಿಯ ಸೋಂಕಿತರಿದ್ದು, ಈ ಸೋಂಕಿತರ ಸಂಖ್ಯೆ ಮಾರ್ಚ್​ 2020ಕ್ಕಿಂತ ಕಡಿಮೆಯಾಗಿವೆ.

ದಿನವೊಂದಕ್ಕೆ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.53ರಷ್ಟಿದ್ದು, ಒಂದು ವಾರದಲ್ಲಿ ಸೋಂಕು ಕಾಣಿಸಿಕೊಳ್ಳುವವರ ಪ್ರಮಾಣ ಶೇಕಡಾ 0.59ರಷ್ಟಿದೆ. ಕಳೆದ 24 ಗಂಟೆಯಲ್ಲಿ 453 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಈವರೆಗೆ ದೇಶದಲ್ಲಿ ಸುಮಾರು 4,75,888 ಮಂದಿ ಸಾವನ್ನಪ್ಪಿದ್ದಾರೆ.

ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್​:ಈವರೆಗೆ ಸುಮಾರು 66.61 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಮಂಗಳವಾರ ಒಂದೇ ದಿನ 10,14,079 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್​ (ಐಸಿಎಂಆರ್​) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,38,34,78,181 ಕೋಟಿ ಮಂದಿಗೆ ವ್ಯಾಕ್ಸಿನೇಷನ್ ನೀಡಲಾಗಿದೆ.

ಒಮಿಕ್ರಾನ್ ಸೋಂಕು: ಆರೋಗ್ಯ ಇಲಾಖೆಯು ಮಾಹಿತಿಯಂತೆ ಪ್ರಕಾರ ದೇಶದ ವಿವಿಧೆಡೆ ಒಮಿಕ್ರಾನ್​ ಪ್ರಕರಣಗಳು ಕಂಡುಬಂದಿವೆ. ಮಹಾರಾಷ್ಟ್ರದಲ್ಲಿ (54), ದೆಹಲಿ (54), ರಾಜಸ್ಥಾನ (18), ಕರ್ನಾಟಕ (19), ತೆಲಂಗಾಣ (20), ಗುಜರಾತ್ (14), ಕೇರಳ (15), ಆಂಧ್ರಪ್ರದೇಶ (1), ಚಂಡೀಗಢ (1), ತಮಿಳುನಾಡು (1) ಮತ್ತು ಪಶ್ಚಿಮ ಬಂಗಾಳ(1), ಉತ್ತರ ಪ್ರದೇಶ (2), ಒಡಿಶಾ (2) ಒಮಿಕ್ರಾನ್ ಪ್ರಕರಣಗಳು ಸೇರಿದಂತೆ ಒಟ್ಟು 202 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ:ಚಂಡಮಾರುತಕ್ಕೆ ತತ್ತರಿಸಿದ ಫಿಲಿಪ್ಪಿನ್ಸ್​... ಸಾವಿನ ಸಂಖ್ಯೆ 375ಕ್ಕೇರಿಕೆ!

ABOUT THE AUTHOR

...view details