ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 6,317 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 318 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 78,190 ಸಕ್ರಿಯ ಪ್ರಕರಣಗಳಿವೆ. ಕಳೆದ 575 ದಿನಗಳಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಶೇಕಡಾ ದರ 0.22ರಷ್ಟಿದೆ. ಜೊತೆಗೆ ನಿನ್ನೆ 318 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,78,325 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 6,906 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,42, 01,996 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.40 ರಷ್ಟಿದೆ.
ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಕಡಿಮೆಯಾಗಿದೆ. ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 1,38,95,90,670 ಕ್ಕೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 57, 05, 039 ಡೋಸ್ ವ್ಯಾಕ್ಸಿನ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
Omicron cases in India : ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಒಮಿಕ್ರಾನ್ ಆತಂಕ ಮೂಡಿಸಿದೆ. ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಭಾರತದಲ್ಲಿ ಸದ್ಯಕ್ಕೆ ಒಟ್ಟು 213 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 57 ಮತ್ತು 54 ಪ್ರಕರಣಗಳು ವರದಿಯಾಗಿವೆ. ಇದುವರೆಗೆ ಒಟ್ಟು 90 ಮಂದಿ ಒಮಿಕ್ರಾನ್ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.