ನವದೆಹಲಿ:ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ 38,079 ಕೇಸ್ಗಳು ಪತ್ತೆಯಾಗಿವೆ. ನಿನ್ನೆ ಒಂದೇ ದಿನ 560 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ 4,13,091 ಕ್ಕೆ ಏರಿದೆ.
ದೇಶದಲ್ಲಿ 38 ಸಾವಿರ ಹೊಸ COVID ಕೇಸ್.. ಚೇತರಿಕೆ ಪ್ರಮಾಣ ಶೇ.97.31 - ‘ICMR
ಕೋವಿಡ್ ಎರಡನೇ ಅಲೆ ಮುಗಿಯುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಯಾಗಿದೆ.
Covid
ಕೋವಿಡ್ ಸೋಂಕಿತರ ಸಂಖ್ಯೆ 3,10,64,908ಕ್ಕೆ ಹೆಚ್ಚಳವಾಗಿದ್ದು, ಸದ್ಯ 4,24,025 ಸಕ್ರಿಯ ಪ್ರಕರಣಗಳಿವೆ. ಚೇತರಿಗೆ ಪ್ರಮಾಣ ಶೇಕಡಾ 97.31% ರಷ್ಟಿದೆ.
ಕಳೆದ 24 ಗಂಟೆಯಲ್ಲಿ 19,98,715 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ 44,20,21,954 ಜನರಿಗೆ ತಪಾಸಣೆ ಮಾಡಲಾಗಿದೆ. ಈವರೆಗೆ 39.96 ಕೋಟಿ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.
Last Updated : Jul 17, 2021, 10:42 AM IST