ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 25,072 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಅವಧಿಯಲ್ಲಿ 389 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಒಟ್ಟಾರೆ 4,34,756 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ: ದೇಶದಲ್ಲಿ ನಿನ್ನೆ 44 ಸಾವಿರ ಮಂದಿ ಚೇತರಿಕೆ - ಕೋವಿಡ್-19
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 25,072 ಮಂದಿಗೆ ಕೋವಿಡ್ ದೃಢಪಟ್ಟಿದೆ. 389 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ; 44,157 ಮಂದಿ ಚೇತರಿಕೆ, 389 ಮಂದಿ ಸೋಂಕಿಗೆ ಬಲಿ
ಕಳೆದೊಂದು ದಿನದಲ್ಲಿ ಜಾಗತಿಕ ಮಾರಕ ಸೋಂಕಿನಿಂದ 44,157 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,16,80,626 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,33,924ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಈವರೆಗೆ 58,25,49,595 ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 7,95,543 ಜನರಿಗೆ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಕೋವಿಡ್ ಪರೀಕ್ಷೆಗಳನ್ನು ಕಡಿಮೆ ಮಾಡಿದ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಹೇಳಲಾಗುತ್ತಿದೆ.