ಕರ್ನಾಟಕ

karnataka

ETV Bharat / bharat

ದೇಶದಲ್ಲಿ ಕೊಂಚ ತಗ್ಗಿದ ಕೋವಿಡ್​​: 2,706 ಹೊಸ ಕೇಸ್ ಪತ್ತೆ​​, 25 ಮಂದಿ ಸಾವು

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕುಸಿತ ಕಂಡಿದೆ. ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ.

covid report
ಸಾಂದರ್ಭಿಕ ಚಿತ್ರ

By

Published : May 30, 2022, 10:25 AM IST

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,706 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,55,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 25 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,611 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ.0.97 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.58 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 17,698 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಭಾನುವಾರ) 2,070 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,13,440 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 193.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕೋವಿಡ್-19ಗಾಗಿ ಮೇ 29 ರವರೆಗೆ 85,00,77,409 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 2,78,267 ಮಾದರಿಗಳನ್ನು ಭಾನುವಾರ ಪರೀಕ್ಷಿಸಲಾಗಿದೆ.

ಇದನ್ನೂ ಓದಿ:ಭಾರತದ ಕೋವಿಡ್​​ ಲಸಿಕಾ ಅಭಿಯಾನವನ್ನು ಶ್ಲಾಘಿಸಿದ ಬಿಲ್ ಗೇಟ್ಸ್

ABOUT THE AUTHOR

...view details