ಕರ್ನಾಟಕ

karnataka

ETV Bharat / bharat

COVID: ಭಾರತದಲ್ಲಿ 4,270 ಹೊಸ ಕೇಸ್​​ ಪತ್ತೆ, 15 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತ ಪ್ರಕರಣಗಳ ವರದಿ ಹೀಗಿದೆ..

India covid report
ಸಾಂದರ್ಭಿಕ ಚಿತ್ರ

By

Published : Jun 5, 2022, 10:16 AM IST

ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 4,270 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43,176,817ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ಜೂನ್ 3 ರಂದು (ಸುಮಾರು 3 ತಿಂಗಳ ನಂತರ) ದೇಶದಲ್ಲಿ 4,041 ಪ್ರಕರಣ ಪತ್ತೆಯಾಗುವ ಮೂಲಕ 4 ಸಾವಿರ ಗಡಿ ದಾಟಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 15 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,692 ಮಂದಿ ಸಾವನ್ನಪ್ಪಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ. 1.03 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ. 0.84 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.73. ಸದ್ಯ ದೇಶದಲ್ಲಿ 24,052 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,619 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,28,073 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 194.09 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ:ರಾಜ್ಯದಲ್ಲಿ 222 ಮಂದಿಗೆ ಕೋವಿಡ್​​ ಸೋಂಕು : ಸಾವು ಶೂನ್ಯ

ABOUT THE AUTHOR

...view details