ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 8,954 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,45,96,776 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 99,023 ಸಕ್ರಿಯ ಪ್ರಕರಣಗಳಿವೆ. ಇದ ಜತೆಗೆ, ನಿನ್ನೆ 267 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,69,247 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 10,207 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 98.36 ಇದೆ. ಈವರೆಗೆ ದೇಶದಲ್ಲಿ ಕೋವಿಡ್‌ನಿಂದ ಚೇತರಿಸಿಕೊಂಡವರ ಸಂಖ್ಯೆ 3,40,08,183 ಕ್ಕೆ ಏರಿಕೆಯಾಗಿದೆ.
ಪಾಸಿಟಿವಿಟಿ ದರ ಶೇ. 0.29 ರಷ್ಟಿದೆ. ಜನವರಿ 16 ರಿಂದ ದೇಶಾದ್ಯಂತ ಕೋವಿಡ್ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 124.10 (1,24,10,86,850) ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ನೀಡಲಾಗಿದೆ.
ಹೊಸ ರೂಪಾಂತರಿ ಭಯ:
ದಕ್ಷಿಣ ಆಫ್ರಿಕಾದಲ್ಲಿ ಮತ್ತೊಂದು ಬಗೆಯ ಕೋವಿಡ್ ರೂಪಾಂತರಿ ಪತ್ತೆಯಾಗಿದ್ದು, ವಿಶ್ವಸಂಸ್ಥೆ ಅದಕ್ಕೆ 'omicron' ಎಂದು ಹೆಸರಿಟ್ಟಿದೆ. ಇದು ಕೋವಿಡ್‌ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತದೆ. ದಕ್ಷಿಣ ಆಫ್ರಿಕಾದ ಹೆಚ್ಚು ಜನಸಂಖ್ಯೆ ಹೊಂದಿರುವ ಗೌಟೆಂಗ್ ಪ್ರಾಂತ್ಯದಲ್ಲಿ ಈ ರೂಪಾಂತರಿ ಕಂಡು ಬಂದಿದೆ. ಇದು ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚು ಸಾಂಕ್ರಾಮಿಕವಾಗಿದೆ ಎಂದು ಹೇಳಲಾಗುತ್ತದೆ.
ಇದನ್ನೂ ಓದಿ:Omicron ಪೀಡಿತ ರಾಷ್ಟ್ರಗಳ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಿದ ಮಹಾರಾಷ್ಟ್ರ