ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,096 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ನಿನ್ನೆ 81 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,21,345 ಕ್ಕೆ ಏರಿದೆ. ದೈನಂದಿನ ಪಾಸಿಟಿವಿಟಿ ದರ ಶೇ.0.24 ರಷ್ಟಿದ್ದು, 13,013 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ 98.76 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,447 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,93,773 ಮಂದಿ ಗುಣಮುಖರಾಗಿದ್ದಾರೆ.